ಬೈಕ್ ಗೆ ಲಾರಿ ಡಿಕ್ಕಿ: ಓರ್ವ ಸಾವು
ಕೋಲಾರ, ಮಾ.4- ಬೈಕ್ನಲ್ಲಿ ಹೋಗುತ್ತಿದ್ದ ಸವಾರರಿಗೆ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬಾತ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಂಗಲಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ಚಿತ್ರದುರ್ಗ ಮೂಲದ ಮಹೇಶ್ (35) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಮಹೇಶ್ ತನ್ನ ಸ್ನೇಹಿತನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಹೆಬ್ಬಣಿ ಗ್ರಾಮದ ಬಳಿ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಇವರ ಬೈಕ್ಗೆ ಅಪ್ಪಳಿಸಿದೆ.
ಪರಿಣಾಮವಾಗಿ ಮಹೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು , ಈತನನ್ನು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ನಂಗಲಿ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.