ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಟ್ಟ ಗೋವಾ ಬಿಜೆಪಿ ಸರ್ಕಾರ

ಪಣಜಿ: ಅನಾರೋಗ್ಯಕ್ಕಿಡಾಗಿರುವ ಇಬ್ಬರು ಸಚಿವರನ್ನು ಗೋವಾ ಸರ್ಕಾರ ಸಚಿವ ಸಂಪುಟದಿಂದ ಕೈಬಿಟ್ಟಿದೆ. ಬಿಜೆಪಿಯ ಫ್ರಾನ್ಸಿಸ್ ಡಿ ಸೋಜ ಮತ್ತು ಪಾಂಡುರಂಗ ಮಡ್ಕೈಕರ್ ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ತಮ್ಮ ಅನಾರೋಗ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿಯೇ ಈ ವಿದ್ಯಮಾನ ನಡೆದಿದೆ. ನಗರಾಭಿವೃದ್ಧಿ ಸಚಿವರಾಗಿದ್ದ ಡಿಸೋಜ ಮತ್ತು ಇಂಧನ ಖಾತೆ ಸಚಿವರಾಗಿ ಮಡ್ಕೈಕರ್ ಕಾರ್ಯನಿರ್ವಹಿಸುತ್ತಿದ್ದರು.

ಡಿಸೋಜ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಡ್ಕೈಕರ್ ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಇಬ್ಬರ ಬದಲಿಗೆ ಸಂಜೆ ಬಿಜೆಪಿ ನಾಯಕರಾದ ನೀಲೇಶ್ ಕಬ್ರಲ್ ಮತ್ತು ಮಿಲಿಂಡ್ ನಾಯಕ್ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ