ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂದ್ರಶೇಖರ್​ ಕಂಬಾರ್ ಆಯ್ಕೆ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಗದಗ ನಗರದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಡಿ.7, 8ರಂದು ನಡೆಯಲಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್​ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ