ಸರ್ಕಾರಿ ಶಾಲೆಗಳ ಸೌಲಭ್ಯಗಳ ಬಗ್ಗೆ ಮಕ್ಕಳು ಮತ್ತು ಪೆÇೀಷಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ: ಡಾ.ಎಲ್.ಹನುಮಂತಯ್ಯ

Varta Mitra News

ಬೆಂಗಳೂರು,ಸೆ.30-ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಕ್ಕಳು ಮತ್ತು ಪೆÇೀಷಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ.
ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜಯಂತಿ ಅಂಗವಾಗಿ ಇಂದು ಕಾಸಿಯಾ ಸಭಾಂಗಣದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ವಿಧಾನಸಭೆ ಸದಸ್ಯ ವಿ.ಸೋಮಣ್ಣ , ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನಾನು ಸರ್ಕಾರಿ ಶಾಲೆಯಲ್ಲೇ ಓದಿದ್ದೇವೆ. 70ರ ದಶಕದಲ್ಲಿ ಯಾವುದೇ ರೀತಿಯ ಸೌಲಭ್ಯಗಳಿರಲಿಲ್ಲ. ಈಗ ಎಲ್ಲ ಸವಲತ್ತುಗಳು ಸಿಗುತ್ತಿವೆ. ಆದರೆ ಮಕ್ಕಳು ಸರ್ಕಾರಿ ಶಾಲೆಯತ್ತ ಬರುತ್ತಿಲ್ಲ. ಹೀಗಾಗಿ ನಾವೆಲ್ಲರೂ ಅವರಲ್ಲಿ ಅರಿವು ಮೂಡಿಸಿ ಸರ್ಕಾರಿ ಶಾಲೆಯತ್ತ ಬರುವಂತೆ ಮಾಡುವ ಅವಶ್ಯಕತೆ ಇದೆ ಎಂದರು.

ಇಂಗ್ಲಿಷ್ ಒಂದು ಭಾಷೆಯನ್ನಾಗಿ ಕಲಿಯುವುದು ತಪ್ಪಲ್ಲ. ಆದರೆ ಕನ್ನಡವನ್ನು ಉಳಿಸಬೇಕಾದ ಕರ್ತವ್ಯವೂ ಎಲ್ಲರ ಮೇಲೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಕೆಲವರು ಪಕ್ಷ ಬೆಳೆಯುತ್ತಾರೆ, ಕೆಲವರು ಸ್ವಯಂ ಶಕ್ತಿಯಿಂದ ಬೆಳೆಯುತ್ತಾರೆ. ಆದರೆ ಪಕ್ಷದಲ್ಲಿದ್ದು ಪಕ್ಷಾತೀತವಾಗಿ ಗುರುತಿಸಿಕೊಳ್ಳುವುದು ಬಲು ಅಪರೂಪ. ಅಂಥ ಸಾಲಿನಲ್ಲಿ ವಿ.ಸೋಮಣ್ಣ ಇದ್ದಾರೆ ಎಂದು ಪ್ರಶಂಸಿಸಿದರು.
ಸಮಾಜವನ್ನು ಬೆಳೆಸುವುದು ನಮ್ಮೆಲ್ಲರ ಉದ್ದೇಶವಾಗಿದೆ. ನಾವಿಬ್ಬರೂ ಬೇರೆ ಬೇರೆ ಪಕ್ಷದವರಾಗಿದ್ದರೂ ನಮ್ಮಿಬ್ಬರ ಮನೋಭಾವ, ಉದ್ದೇಶ ಒಂದೇ ಎಂದರು.

ವಿಧಾನಪರಿಷತ್ ಸದಸ್ಯ ಆ.ದೇವೇಗೌಡ ಮಾತನಾಡಿ, ಪ್ರತಿಭೆಯು ಯಾರ ಆಸ್ತಿಯೂ ಅಲ್ಲ. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಸಂಸ್ಕಾರ ಸಂಸ್ಕøತಿ ಕಲಿತರೆ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.
ನಮ್ಮ ಪ್ರತಿಷ್ಠಾನದ ವತಿಯಿಂದ ವಿ.ಸೋಮಣ್ಣನವರ ಹೆಸರಿನಲ್ಲಿ ಪ್ರತಿ ವರ್ಷವೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿ ನಿಡುವ ಮೂಲಕ ಮತ್ತಷ್ಟು ಉನ್ನತಿಗೆ ಪೆÇ್ರೀ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 2017-18ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ/ಬಿಬಿಎಂಪಿ ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಸಿ.ಸೋಮಣ್ಣ, ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣ, ವಿಧಾನಸಭಾ ಸದಸ್ಯ ವಿ.ಸೋಮಣ್ಣ ಮತ್ತಿತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ