ಬೆಂಗಳೂರು, ಸೆ.30-ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎನ್ಜಿಒ, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕು ಎಂದು ಶಿಕ್ಷಣ ಸಚಿವ ಮಹೇಶ್ ತಿಳಿಸಿದರು.
ನಗರದ ಶಿಕ್ಷಕರ ಸದನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಹಳೆ ವಿದ್ಯಾರ್ಥಿಗಳ ಸಂಘದ ರಾಯಭಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಸರ್ಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಅಸಾಧ್ಯ ಆದ್ದರಿಂದ ಕಾಪೆರ್Çೀರೇಟ್ ಕಂಪನಿಗಳು, ರೋಟರಿ ಮತ್ತು ಲಯನ್ ಸಂಸ್ಥೆಯನ್ನು ಮನವಿ ಮಾಡಿದ್ದೇವೆ ಎಂದು ಹೇಳಿದರು.
ಸರ್ಕಾರಿ ಶಾಲೆಯೆಂಬ ಕೀಳರಿಮೆ ಬಿಟ್ಟು ಹೆಚ್ಚಿನ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸಹ ಸಾಕಷ್ಟು ಹಣ ಬಿಡುಗಡೆ ಮಾಡಿದ್ದು, ಇದು ಸಮಪರ್ಕವಾಗಿ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ಶಿಕ್ಷಣದ ಜೊತೆಗೆ ಅವರ ಪ್ರತಿಭೆಗಳನ್ನು ಪೆÇ್ರೀ ಕೆಲಸ ಮಾಡಬೇಕು ಎಂದು ಹೇಳಿದರು.
ಖಾಸಗಿ ಶಾಲೆಯ ವಿದ್ಯಾರ್ಥಿಗಳು ಬಾಯಿಪಾಠದ ಗಿಳಿಗಳಂತೆ, ಆದರೆ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಿಡುಗಗಳಂತೆ ಇದ್ದಾರೆ. ಖಾಸಗಿ ಶಾಲೆಯಲ್ಲಿ ಓದಿದವರು ವಿದೇಶಕ್ಕೆ ಹೋಗುತ್ತಾರೆ, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ತಾಯ್ನಾಡಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಡಾ.ಕೃಪಾ ಆಳ್ವ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಬಸವರಾಜ್, ಕೆಆರ್ಪುರದ ಇಟಾಚಿ ಮಂಜು ಮತ್ತಿತರರಿದ್ದರು.