ಭಾರತ ಮತ್ತು ಪಾಕ್ ನಡುವೆ ಮಧ್ಯಸ್ಥಿಕೆ ವಹಿಸುವಂತೆ ಪಾಕ್ನಿಂದ ಅಮೆರಿಕಕ್ಕೆ ಮನವಿ

ವಾಷಿಂಗ್ಟನ್, ಅ.4- ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆಗೆ ಸಂಧಾನ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕಿಸ್ತಾನ, ಅಮೆರಿಕಕ್ಕೆ ಮನವಿ ಮಾಡಿದೆ.
ದಕ್ಷಿಣ ಏಷ್ಯಾದ ಈ ಎರಡು ರಾಷ್ಟ್ರಗಳು ದ್ವಿಪಕ್ಷೀಯ ಮಾತುಕತೆ ನಡೆಸದಿರುವ ಕಾರಣ ಸಂಧಾನ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮೂದ್ ಖುರೇಷಿ ಅಮೆರಿಕಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಇಂಥ ಸಂಧಾನ ಮಧ್ಯಸ್ಥಿಕೆ ಇಲ್ಲದಿದ್ದರೆ ಅದು ಉದ್ವಿಗ್ನತೆ ಉಲ್ಬಣಗೊಳ್ಳಲು ಎಡೆ ಮಾಡಿಕೊಡುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ಆದರೆ ಪಾಕಿಸ್ತಾನದ ಈ ಹೊಸ ಮನವಿಯನ್ನು ಅಮೆರಿಕ ಮತ್ತೆ ತಿರಸ್ಕರಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ