ಬೆಂಗಳೂರು: ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯ್ಯಸ್ಸಿನ್ನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ ಮಹಿಳೆ ಅವರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದರು.
ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ದೇವೇಗೌಡರು ತಿಳಿಸಿದ್ದಾರೆ.