ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ,ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವನಾ ಆಯೋಗ ದಿನಾಂಕ ಪ್ರಕಟಿಸಿದ್ದು, ತೆಲಂಗಾಣ ರಾಜ್ಯಕ್ಕೆ ಅ.12ರ ಬಳಿಕ ಅಧಿಕೃತವಾಗಿ ಚುನಾವಣಾಣ ಅದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.
ನವದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯಸ್ಥ ಓಂ ಪ್ರಕಾಶ್ ರಾವತ್ ಸುದ್ದಿಗೋಷ್ಠಿ ನಡೆಸಿ, ಮಧ್ಯ ಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 28ಕ್ಕೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್ ಗಢದಲ್ಲಿ ನವೆಂಬರ್ 12 ಮತ್ತು 20ಕ್ಕೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದರು.
ತೆಲಂಗಾಣದ ಮತ್ತು ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯುಲಿದ್ದು, ಡಿಸೆಂಬರ್ 11ಕ್ಕೆ ಎಲ್ಲಾ ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಐದು ರಾಜ್ಯಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಅಭ್ಯರ್ಥಿಗಳ ಚುನಾವಣಾ ವೆಚ್ಚ 28 ಲಕ್ಷ ರುಪಾಯಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ನ ಸೂಚನೆ ಮತ್ತು ನಿಯಮದ ಪ್ರಕಾರ ಆಸ್ತಿ ವಿವರ, ಕ್ರಿಮಿನಲ್ ಹಿನ್ನೆಲೆ ಘೋಷಿಸುವುದು ಕಡ್ಡಾಯವಾಗಿದೆ ಎಂದು ರಾವತ್ ಹೇಳಿದ್ದಾರೆ.