ನವದೆಹಲಿ: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ, ಮಂಡ್ಯದ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾದಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಒ. ಪಿ. ರಾಮತ್ ಈ ವಿಷಯ ತಿಳಿಸಿದರು. ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಬಳ್ಳಾರಿಯಲ್ಲಿ ಶ್ರೀರಾಮುಲು ಹಾಗೂ ಮಂಡ್ಯದಲ್ಲಿ ಸಿ. ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಡಿಸೆಂಬರ್ 11 ರಂದು ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿವಮೊಗ್ಗ, ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾಗಿದ್ದ ಬಳ್ಳಾರಿ ಮತ್ತು ಸಚಿವ ಸಿ.ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರಗಳು ತೆರವಾಗಿದ್ದವು.
ಇನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಕ್ಷೇತ್ರ ಮತ್ತು ದಿವಂಗತ ಸಿದ್ದು ನಾಮಗೌಡ ಅವರ ನಿಧನದಿಂದ ಜಮಖಂಡಿ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಈ ಹಿನ್ನಲೆಯಲ್ಲಿ ಚುನಾವಣೆ ನಡೆಯಲಿದೆ.