ಸಚಿವ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಮಾಹಿತಿ ಹಕ್ಕು ಕಾರ್ಯಕರ್ತನ ಮನವಿ

ಬೆಂಗಳೂರು, ಅ.9- ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡದ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಐದು ಸಚಿವ ಸಂಪುಟ ಸಭೆಗೆ ಹಾಜರಾಗಿಲ್ಲ. ಇಲಾಖೆಯಲ್ಲಿ ಗಂಭೀರ ಸಮಸ್ಯೆಗಳಿದ್ದರೂ ಸಚಿವರು ಸಂಪುಟ ಸಭೆಗೆ ಹಾಜರಾಗುತ್ತಿಲ್ಲ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮುಖ್ಯಕಾರ್ಯದರ್ಶಿ ಮತ್ತು ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಗಡದ್ ಸುದ್ದಿಗಾರರಿಗೆ ತಿಳಿಸಿದರು.
ಸಚಿವ ಸ್ಥಾನದಲ್ಲಿ ರಮೇಶ್ ಜಾರಕಿಹೊಳಿ ಅವರು ಮುಂದುವರೆದರೆ ಇಲಾಖೆಯ ಅಭಿವೃದ್ಧಿ ಕಾರ್ಯಗಳಾಗುವುದಿಲ್ಲ ಎಂದು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ