ಬೆಂಗಳೂರು: ದೇಶದಲ್ಲಿ ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ಹೋರಾಟ ಮಾಡಲು ಮುಂದಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ನಿಲುವಿಗೆ ನಮ್ಮ ಬೆಂಬಲವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಸೋಮವಾರ ವಿಧಾನಸೌಧಕ್ಕೆ ಆಗಮಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಪರಮೇಶ್ವರ್ ಅವರನ್ನು ಭೇಟಿ ಮಾಡಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಇವರನ್ನು ಭೇಟಿ ಮಾಡಿದ್ದ ಸಂತಸ ನೀಡಿತು.ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಕೇಳಿ ಬರುತ್ತಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಹೋರಾಟ ಮಾಡುವ ಬಗ್ಗೆ ಚರ್ಚಿಸಿದರು ಎಂದರು.