ಬೆಂಗಳೂರು: ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಉಗ್ರಪ್ಪ ಅವರನ್ನು ಬಳ್ಳಾರಿಯಲ್ಲಿ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಕಣಕ್ಕಿಳಿಸಿದ್ದೇವೆ. ಇದು ಚುನಾವಣೆ ರಣನೀತಿ. ಇದನ್ನುಕಾಂಗ್ರೆಸ್ ದುರ್ಬಲಎಂದು ವ್ಯಾಖ್ಯಾನಿಸುವುದು ಅರಿಯಲ್ಲ. ಈ ರಣನೀತಿಯ ಹಿಂದಿನಉದ್ದೇಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿಳಿಯಲಿದೆ ಎಂದರು.
ಮಂಡ್ಯ ಹಾಗೂ ರಾಮನಗರದಲ್ಲಿ ಉಪಯುಕ್ತ ಕೆಲಸಕ್ಕೆ ಹೊಂದಾಣಿಕೆ ಮುಖ್ಯವಾಗಿದೆ. ಹೀಗಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಬಾಲಕೃಷ್ಣ ಬಿಜೆಪಿ ಸೇರ್ಪಡೆ ವಿಚಾರ ತಿಳಿದಿಲ್ಲ. ಅವರು ನಮ್ಮ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದರು.