ನವದೆಹಲಿ: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಸಮೀಸುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆಯೇ ಎಂಬ ಮಾತು ಕೇಳಿಬರುತ್ತಿದೆ ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ಇನ್ನಷ್ಟು ಪುಷ್ಟಿ ನೀಡುವಂತಿದೆ.
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ದಿಗ್ವಿಜಯ್, ಪಕ್ಷದಿಂದ ಯಾರಿಗೇ ಟಿಕೆಟ್ ದೊರೆತರೂ, ಶತ್ರುಗಳಿಗೇ ಟಿಕೆಟ್ ದೊರೆತರೂ ಕೂಡ ಅವರನ್ನು ಗೆಲ್ಲಿಸಿ. ಪ್ರಚಾರ ಮಾಡದಿರುವುದು, ಭಾಷಣ ಮಾಡದೇ ಇರುವುದಷ್ಟೇ ನನ್ನ ಕೆಲಸ. ನಾನು ಭಾಷಣ ಮಾಡುವುದರಿಂದ ಕಾಂಗ್ರೆಸ್ ಗೆ ಅಲ್ಪ ಮತಗಳು ಸಿಗುತ್ತ ವೆ. ಹೀಗಾಗಿ ನಾನು ಭಾಷಣ, ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕಮಲ್ ನಾಥ್, ದಿಗ್ವಿಜಯ್ ಯಾವ ಸಂದರ್ಭದಲ್ಲಿ ಹೀಗೆ ಹೇಳಿಕೆ ನೀಡಿದ್ದಾರೆಂಬುದು ತಿಳಿದಿಲ್ಲ ಎಂದಿದ್ದಾರೆ.