ಬೆಂಗಳೂರು,ಅ.17- ಮದ್ಯಪಾನ ಮಾಡದಂತೆ ತಂದೆ ಬುದ್ದಿ ಹೇಳಿದ್ದಕ್ಕೆ ಕುಪಿತಗೊಂಡ ನವವಿವಾಹಿತನೊಬ್ಬ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಬಾಗಲೂರು ಗ್ರಾಮದ ನಿವಾಸಿ ಅನಿಲ್ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ.
ಏಳು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಈತ ಇತ್ತೀಚೆಗೆ ಕುಡಿತದ ಚಟಕ್ಕೆ ಒಳಗಾಗಿದ್ದ. ಇದನ್ನು ಅರಿತ ತಂದೆ ನಿನ್ನೆ ಅನಿಲ್ಗೆ ಬುದ್ದಿವಾದ ಹೇಳಿದ್ದಾರೆ.
ಇದರಿಂದ ಕೋಪಗೊಂಡ ಅನಿಲ್ಕುಮಾರ್ ಗೋಪಾಲಪುರ ಮುಖ್ಯರಸ್ತೆಯಲ್ಲಿರುವ ತಮ್ಮ ಜಮೀನಿಗೆ ಹೋಗಿ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮರದಲ್ಲಿ ಶವ ನೇತಾಡುತ್ತಿದ್ದನ್ನು ಕಂಡ ಸ್ಥಳೀಯರು ಮೃತನ ಕುಟುಂಬದವರಿಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೆÇಲೀಸರು ಶವವನ್ನು ಕೆಳಗಿಳಿಸಿ ಅಂಬೇಡ್ಕರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಬಾಗಲೂರು ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ