ಬೆಂಗಳೂರು,ಅ.18-ರಾಜ್ಯದ ಎರಡು ವಿಧಾನಸಭೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಪ್ರತಿ ಕ್ಷೇತ್ರಕ್ಕೆ ಒಬ್ಬರು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚದ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಇವರು ಚುನಾವಣೆ ಪ್ರಕ್ರಿಯೆ ಹಾಗೂ ಅಭ್ಯರ್ಥಿಗಳು ಮಾಡುವ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲಿದ್ದಾರೆ.
ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗೆ ಐಎಎಸ್, ಐಆರ್ಎಸ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ವಿ.ಲಲಿತ ಲಕ್ಷ್ಮಿ , ಜಮಖಂಡಿ ವಿಧಾಸಭಾ ಕ್ಷೇತ್ರಕ್ಕೆ ಸಂಕೇತ್.ಎಸ್ ಬೊಂಧವೆ ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಅದೇ ರೀತಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಭಾಸ್ಕರ್ ಜ್ಯೋತಿ ಶರ್ಮ, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಜಯ್ ಕುಮಾರ್ ರಾಕೇಶ್ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪಂಡರೀ ಯಾದವ್ ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ವೆಚ್ಚದ ವೀಕ್ಷರನ್ನಾಗಿ ಬಳ್ಳಾರಿ ಕ್ಷೇತ್ರಕ್ಕೆ ಮನೀಶ್ ಕುಮಾರ್ ಚಾವ್ಡಾ, ಶಿವಮೊಗ್ಗ ಕ್ಷೇತ್ರಕ್ಕೆ ವಿಜಯ್ ನಾರಾಯಣ್ ಕೊತಾರಿ, ಮಂಡ್ಯಕ್ಕೆ ಗೌತಮ್ ಜೈನ್, ರಾಮನಗರಕ್ಕೆ ರಾಜ್ಕರಣ್ ವರ್ಮ, ಜಮಖಂಡಿಗೆ ವಿಷ್ಣು ಬಜಾಜ್ ಅವರನ್ನು ನೇಮಕ ಮಾಡಲಾಗಿದೆ.