ಬೆಂಗಳೂರು, ಅ.21-ಜಮೀನು ವಿವಾದಕ್ಕೆ ಸಂಬಂಧಿಸಿ ಉಂಟಾದ ಜಗಳ ತಾರಕಕ್ಕೇರಿದಾಗ ವ್ಯಕ್ತಿಯೊಬ್ಬನ ಕಾಲಿಗೆ ಗುಂಡು ಹಾರಿಸಿದ ಘಟನೆ ಆನೇಕಲ್ನ ಜಿಗಣಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಲಿಂಗಾಪುರ ಗ್ರಾಮದ ನಿವಾಸಿ ರಾಮು ಎಂಬವರ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಬೊಮ್ಮ ಸಂದ್ರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಲಿಂಗಾಪುರ ಗ್ರಾಮದ ನಿವಾಸಿ ಸಾದಪ್ಪ ಗುಂಡು ಹೊಡೆದು ಪರಾರಿಯಾಗಿದ್ದಾನೆ. ಈತನ ಪತ್ತೆಗೆ ಪೆÇಲೀಸರು ಬಲೆ ಬೀಸಿದ್ದಾರೆ.
ಇಂದು ಬೆಳಗ್ಗೆ ರಾಮು ತನ್ನ ಜಮೀನನ್ನು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಸಾದಪ್ಪ, ಜಮೀನು ವಿವಾದ ಮುಂದಿಟ್ಟು ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ತಾರಕಕ್ಕೇರಿದಾಗ ಸಾದಪ್ಪ ತನ್ನ ಬಳಿ ಇದ್ದ ಎಸ್ಬಿಎಲ್ ಗನ್ನಿಂದ ಗುಂಡು ಹಾರಿಸಿದ್ದಾನೆ. ಇದು ರಾಮು ಅವರ ಎಡಗಾಲಿಗೆ ತಗುಲಿದೆ. ಗುಂಡೇಟಿನಿಂದ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನಿನ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು ಎಂದು ಪೆÇೀಲಿಸರು ತಿಳಿಸಿದ್ದಾರೆ. ಜಿಗಣಿ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.