ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಕೃಷ್ಣಾರೆಡ್ಡಿ ಹಾಗೂ ಚಿನ್ನಾರೆಡ್ಡಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ದಾರ ಸಾದ್ಯತೆ
ಬೆಂಗಳೂರು, ಮಾ.6- ರಾಜ್ಯಸಭೆ ಚುನಾವಣೆಗೆ 3ನೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದ್ದು, ಉದ್ಯಮಿ ಕೃಷ್ಣಾರೆಡ್ಡಿ ಹಾಗೂ ಚಿನ್ನಾರೆಡ್ಡಿ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲು ಮುಂದಾಗಿದೆ.
ಮಾ.23ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಚರ್ಚೆ ನಡೆಸಿದರು.
ಕಾಂಗ್ರೆಸ್ ಪಾಳಯದಲ್ಲಿ ಯುವ ಹಾಗೂ ಉತ್ಸಾಹಿ ಸಂಸದೀಯ ಪಟುಗಳನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕೆಂಬ ಚಿಂತನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದಿಂದ ಸಲೀಂ ಅಹಮ್ಮದ್ ಹೆಸರು ಪ್ರಮುಖವಾಗಿ ಕೇಳಿಬಂದಿದೆ.
ಎ.ಆರ್.ರೆಹಮಾನ್ಖಾನ್, ಐ.ಜಿ.ಸನದಿ, ವಿಧಾನ ಪರಿಷತ್ ಮಾಜಿ ಸದಸ್ಯ ನಜೀರ್ ಅಹಮ್ಮದ್, ರೋಷನ್ ಬೇಗ್ ಅವರು ಸ್ಪರ್ಧೆಯಲ್ಲಿದ್ದಾರೆ.
ಲಿಂಗಾಯತ ಸಮುದಾಯದಿಂದ ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಸ್ಥಳೀಯರಾದ ರಾಣಿ ಸತೀಶ್, ವೈಜ್ಯನಾಥ್ ಪಾಟೀಲ್ ಅವರ ಪುತ್ರ ಕೈಲಾಸ್ನಾಥ್ ಪಾಟೀಲ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.
ಮೂರನೆ ಅಭ್ಯರ್ಥಿಯಾಗಿ ಉದ್ಯಮಿಗಳನ್ನು ಕಣಕ್ಕಿಳಿಸುವ ಚರ್ಚೆ ನಡೆದಿದ್ದು, ಉದ್ಯಮಿ ವೀರಣ್ಣರೆಡ್ಡಿ ಮತ್ತು ಮುಖ್ಯಮಂತ್ರಿ ಆಪ್ತ ಚಿನ್ನಾರೆಡ್ಡಿ ಹೆಸರುಗಳು ಪ್ರಮುಖವಾಗಿವೆ.
ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಯಾದ ನಂತರ ಕಾಂಗ್ರೆಸ್ ಜತೆಗಿನ ಮುನಿಸು ಇನ್ನಷ್ಟು ಉಲ್ಬಣಗೊಂಡಿದೆ. ಜೆಡಿಎಸ್ ಬಂಡಾಯ ಶಾಸಕರ ಬೆಂಬಲದಿಂದ ಕಾಂಗ್ರೆಸ್ ಮೂರನೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದಾದರೂ ಕೊನೆ ಕ್ಷಣದವರೆಗೂ ಅಳೆದು-ತೂಗಿ ಲೆಕ್ಕಾಚಾರ ಹಾಕಲಾಗುತ್ತಿದೆ.