ಬೆಂಗಳೂರು, ಅ.23-ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಯಲು ಪರಿಷತ್ ವತಿಯಿಂದ ಇತ್ತೀಚೆಗೆ ಲಿಂಗೈಕ್ಯರಾದ ಕನ್ನಡ ಜಂಗಮ ಜಗದ್ಗುರು ಗದಗ ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಶ್ರದ್ಧಾಂಜಲಿ, ನುಡಿನಮನ, ಗೀತನಮನ ಕಾರ್ಯಕ್ರಮವನ್ನು ನಾಳೆ (ಅ.24)ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಆಯೋಜಿಸಲಾಗಿದೆ.
ನಗರದ ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಸ್ವಾಮೀಜಿ ಮತ್ತು ಕೂಡಲಸಂಗಮ ಕ್ಷೇತ್ರದ ಶ್ರೀ ಪಂಚಮಸಾಲಿ ಲಿಂಗಾಯತ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಸಚಿವರಾದ ಶಿವಾನಂದಪಾಟೀಲ್, ಶಾಸಕ ವಿ.ಸೋಮಣ್ಣ, ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಹಿರಿಯ ಸಂಶೋಧಕರಾದ ಡಾ.ಷ.ಶಟ್ಟರ್, ಪ್ರಸಿದ್ಧ ಗಾಯಕರಾದ ಸಂಗೀತಕಟ್ಟಿ ಕುಲಕರ್ಣಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕಾರ್ಯಕ್ರಮದ ಮುಖ್ಯಸ್ಥ ಕೆ.ವಿ.ನಾಗರಾಜಮೂರ್ತಿ ತಿಳಿಸಿದ್ದಾರೆ.