ಬೆಂಗಳೂರು, ಅ.23-ಕಲ್ಲಿದ್ದಲು ಕೊರತೆಯಿಂದ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದ್ದು, ಸದ್ಯದಲ್ಲೇ ಸರಿಪಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು.
ಪ್ರೆಸ್ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆಯಿಂದಾಗಿ ಬಳ್ಳಾರಿ ಹಾಗೂ ಯರಮರಸ್ನಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಬಗ್ಗೆ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.
ಕಲ್ಲಿದ್ದಲು ಹಂಚಿಕೆ ಮಾಡಬೇಕಿರುವುದು ಕೇಂದ್ರಸರ್ಕಾರ. ಈ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸುವುದಾಗಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.