ಭಯೋತ್ಪಾದನೆ ಮತ್ತು ಮಾತುಕತೆ ಎರಡು ಒಟ್ಟಿಗೆ ಸಾಗಲು ಸಾಧ್ಯವಿಲ್ಲ; ರಾಜನಾಥ್ ಸಿಂಗ್

ಶ್ರೀನಗರಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿ ಯಾರ ಜೊತೆಗಾದರೂ ಮಾತುಕತೆ ನಡೆಸಲು ಸಿದ್ದವಿದೆ ಆದರೆ ಭಯೋತ್ಪಾದನೆ ಮತ್ತು ಮಾತುಕತೆ ಎರಡು ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

ಮಂಗಳವಾರದಂದು ಹಲವು ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಂಗ್ ಕಾಶ್ಮೀರದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಎಲ್ಲರು ಭಾಗವಹಿಸಬೇಕೆಂದು ಅವರು ಕರೆ ನೀಡಿದರು.

ಬಹುತೇಕ ದೊಡ್ಡ ಸಮಸ್ಯೆಗಳನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪರಿಹರಿಸಬಹುದು,ಅದೇ ರೀತಿ ಕಾಶ್ಮೀರದಲ್ಲಿನ ಹಲವು ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ಮೂಲಕ ಪರಿಹರಿಸಬಹುದು ಆದ್ದರಿಂದ ನಾನು ಎಲ್ಲರಿಗೂ ಪ್ರಜಾಪ್ರಭುತ್ವದ ಈ ಜಾತ್ರೆಯಲ್ಲಿ ಭಾಗವಹಿಸಿ ಎಂದು ಬೇಡಿಕೊಳ್ಳುತ್ತೇನೆ  ಎಂದು ಸಚಿವರು ವಿನಂತಿಸಿಕೊಂಡರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ