ವಾಲ್ಮೀಕಿ ಜಯಂತಿ ಅಂಗವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರಿಂದ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು, ಅ.24- ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶಾಸಕರ ಭವನದ ಬಳಿ ಇರುವ ವಾಲ್ಮೀಕಿ ಪ್ರತಿಮೆಗೆ ಇಂದು ಬೆಳಗ್ಗೆ ಮಾಲಾರ್ಪಣೆ ಮಾಡಿ ಲಂಡನ್‍ಗೆ ತೆರಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಶಾಸಕ ಕೋನರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.

ಈ ಬಾರಿಯ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಪೂರ್ವನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಲಂಡನ್‍ಗೆ ತೆರಳಿದ್ದು, ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾಗವಹಿಸುತ್ತಿಲ್ಲ. ಲಂಡನ್‍ಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯೇ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಲಂಡನ್‍ನಲ್ಲಿ ನಡೆಯುವ ಗ್ಲೋಬಲ್ ಅಚೀವರ್ಸ್ ಕನ್‍ಕ್ಲೇವ್‍ನಲ್ಲಿ ದೇವೇಗೌಡರು ಪಾಲ್ಗೊಳ್ಳಲಿದ್ದು, ಇದೇ 28ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ