ಬೆಂಗಳೂರು, ಅ.25- ಕೊರಟಗೆರೆ ತಾಲ್ಲೂಕಿನ ತುಂಬಗಾನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್ಆರ್ಪಿ ಕಟ್ಟಡಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸೌಧದಲ್ಲಿ ನಡೆಸಿದರು.
ತುಂಬಗಾನಹಳ್ಳಿಯಲ್ಲಿ 120ಎಕರೆ ಪ್ರದೇಶದಲ್ಲಿ ಕೆಎಸ್ಆರ್ಪಿಯ 12ನೇ ಬೆಟಾಲಿಯನ್ಗೆ ಸಂಬಂಧಿಸಿದಂತೆ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ. 560 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ, ಕಾಂಪೌಂಡ್ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಸದ್ಯಕ್ಕೆ 25ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈಗಾಗಲೇ ಕಾಂಪೌಂಡ್ ನಿರ್ಮಾಣವಾಗಿದ್ದು, ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹಿರಿಯ ಅಧಿಕಾರಿಗಳು ಡಿಸಿಎಂಗೆ ಮಾಹಿತಿ ನೀಡಿದ್ದಾರೆ.
ಎಡಿಜಿಪಿ ಭಾಸ್ಕರ್ರಾವ್(ಕೆಎಸ್ಆರ್ಪಿ), ರಾಘವೇಂದ್ರ ಔರಾದ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ಒದಗಿಸಿದರು.