ಬೆಂಗಳೂರು, ಅ.25- ನಕಲಿ ಇಮೇಲ್ ಮತ್ತು ಟ್ವಿಟರ್ಗಳನ್ನು ಸೃಷ್ಟಿಸಿ ತಮ್ಮ ತೇಜೋವಧೆ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನಟ ಅರ್ಜುನ್ ಸರ್ಜಾ ಅವರು ಇಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ನಗರ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಹಾಗೂ ವಕೀಲರು ಲಿಖಿತ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಸುನೀಲ್ ಕುಮಾರ್ ಅವರು ಪರಿಶೀಲಿಸಿ ಮುಂದಿನ ಕ್ರಮಕ್ಕಾಗಿ ಸೈಬರ್ ಠಾಣೆಗೆ ವರ್ಗಾಯಿಸಿದ್ದಾರೆ.
ಮೀಟೂ ಅಭಿಯಾನದಲ್ಲಿ ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿದ್ದರು. ಇದು ಸ್ಯಾಂಡಲ್ವುಡ್ನಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಇಬ್ಬರ ನಡುವೆ ಸಂಧಾನ ನಡೆಸಲು ಚಲನಚಿತ್ರ ರಂಗದ ಪ್ರಮುಖರು ಪ್ರಯತ್ನಿಸುತ್ತಿರುವ ಮಧ್ಯೆಯೇ ವಿವಾದ ಪೆÇಲೀಸ್ ಠಾಣೆ ಮೆಟ್ಟಿಲೇರಿದೆ.