ಫೈರ್ ಸಂಸ್ಥೆ ವಿರುದ್ಧ ಅಸಮಾಧಾನ ಹೊರಹಾಕಿದ ನಟಿ ಪ್ರಿಯಾಂಕಾ ಉಪೇಂದ್ರ

ಬೆಂಗಳೂರು, ಅ.26-ಫೈರ್ ಸಂಸ್ಥೆಯಿಂದ ತಾವು ಹೊರ ಬಂದಿರುವುದಾಗಿ ನಟಿ ಪ್ರಿಯಾಂಕಾ ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.
ಶೋಷಿತ ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ಫೈರ್ ಸಂಸ್ಥೆಯನ್ನು ಸ್ಥಾಪನೆ ಮಾಡಲಾಯಿತು. ಅದರಲ್ಲಿರುವ ಕೆಲವರ ನಡೆಯಿಂದ ಬೇಸರವಾಗಿದೆ ಎಂದು ಹೇಳಿದ್ದಾರೆ.

ನನ್ನ ಗಮನಕ್ಕೆ ತಾರದೆ ನಟಿ ಶ್ರುತಿಹರಿಹರನ್ ಸಮಸ್ಯೆಯನ್ನು ಹೈಲೈಟ್ ಮಾಡಿ ಮುಂದೆ ತೆಗೆದುಕೊಂಡು ಹೋಗಿದ್ದಾರೆ. ಸಂಸ್ಥೆಯ ಎಲ್ಲ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಬಹುದಿತ್ತು. ಆದರೆ ಯಾವುದೂ ನನ್ನ ಗಮನಕ್ಕೆ ಬಂದಿಲ್ಲ. ಹಾಗಾಗಿ ನಾನು ಫೈರ್ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ