ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧೆ: ಅಮಿತ್ ಶಾ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಫರ್ಧಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತಿಶ್ ಕುಮಾರ್ ರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಎರಡೂ ಪಕ್ಷಗಳು ಎಷ್ಟು ಕ್ಷೇತ್ರಗಳಲ್ಲಿ ಮತ್ತು ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂಬುದನ್ನು 2-3 ದಿನದಲ್ಲಿ ಸ್ಪಷ್ಟಪಡಿಸಲಾಗುವುದು ಎಂದು ಹೇಳಿದ್ದಾರೆ.

ಉಳಿದಂತೆ ಇತರೆ ಎನ್ ಡಿಎ ಮಿತ್ರ ಪಕ್ಷಗಳಾದ ಎಲ್ ಜೆಪಿ ಮತ್ತು ಆರ್ ಎಲ್ ಎಸ್ ಪಿ ಸೀಟ್ ಹಂಚಿಕೆಗೆ ಸಂಬಂಧಿಸಿದ ನಿಯಮದಂತೆ ಸ್ಥಾನಗಳನ್ನು ಪಡೆಯಲಿವೆ. ಆರ್ ಎಲ್ ಎಸ್ ಪಿಯ ಉಪೇಂದ್ರ ಕುಶ್ವಾರ ಮತ್ತು ಎಲ್ ಜೆಪಿಯ ರಾಮ್ ವಿಲಾಸ್ ಪಾಸ್ವಾನ್ ಅವರು ನಮ್ಮೊಂದಿಗೇ ಇರಲಿದ್ದಾರೆ ಎಂದು ತಿಳಿಸಿದರು.

ಬಿಹಾರದಲ್ಲಿ 40 ಲೋಕಸಭಾ ಸ್ಥಾನಗಳಿದ್ದು, ಎನ್‌ಡಿಎ ಮಿತ್ರಕೂಟದಲ್ಲಿ ಬಿಜೆಪಿ ಜತೆಗೆ ಜೆಡಿಯು, ಎಲ್‌ಜೆಪಿ ಮತ್ತು ಆರ್‌ಎಲ್‌ ಎಸ್‌ಪಿ ಪಕ್ಷಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ