ನೌಗಾಂ: ಜಮ್ಮು ಕಾಶ್ಮೀರದ ನೌಗಾಂನಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ
ಮೃತ ಸಿಐಎಸ್ಎಫ್ ಅಧಿಕಾರಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಇವರನ್ನು ವಾಗೋರಾದಲ್ಲಿ ಕರ್ತವ್ಯಕ್ಕಾಗಿ ನಿನ್ನೆ ರಾತ್ರಿ ನಿಯೋಜಿಸಲಾಗಿತ್ತು. ಈ ವೇಳೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆ.