ಗೋವ ಸಿಎಂ ಮನೋಹರ ಪರಿಕ್ಕರ್ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳುತ್ತಿದ್ದಾರೆ: ಬಿಜೆಪಿ

ಪಣಜಿ: ಅನಾರೋಗ್ಯಕ್ಕೀಡಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿ ಬಿಜೆಪಿ ತಿಳಿಸಿದೆ.

ಈ ಕುತು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆಯವರು ಮಾಹಿತಿ ನೀಡಿದ್ದು, ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಮುಚ್ಚಿಡುವ ವಿಚಾರಗಳೇನೂ ಇಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೆ ಅವರನ್ನು ಏಮ್ಸ್ ನಿಂದ ಅವರನ್ನು ಕರೆದುಕೊಂಡು ಬರಲಾಗಿದ್ದು, ಪ್ರಸ್ತುತ ಅವರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಕ್ಕರ ತಮ್ಮ ಕುಟುಂಬಸ್ಥರೊಂದಿಗೆ ನೆಮ್ಮದಿಯಾಗಿರಲಿ. ಕುಟುಂಬಸ್ಥರೊಂದಿಗೆ ಕಾಲ ಕಳೆಯುವ ಹಕ್ಕು ಅವರಿಗಿದೆ. ಇದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ತಿಳಿಸಿದ್ದಾರೆ.

ಸಿಎಂ ಪರಿಕ್ಕರ್ ಗೈರು ಹಾಜರಿನಿಂದ ಆಡಳಿತದಲ್ಲಿ ಯಾವುದೇ ಸಮಸ್ಯೆಗಳೂ ಎದುರಾಗಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಹೋಗುತ್ತಿದೆ. ಹೊಸ ಯೋಜನೆಗಳಿಗೆ ಚಾನೆ ನೀಡಿದ್ದೇವೆ ಎಂದು ಹೇಳಿದರು.

ಸಿಎಂ ಪರಿಕ್ಕರ್ ಅ.30 ರಂದು ತಮ್ಮ ನಿವಾಸದಲ್ಲೇ ಪರಿಕ್ಕರ್ ಅವರು ಹೂಡಿಕೆ ಉತ್ತೇಜನಾ ಮಂಡಳಿ ಹಾಗೂ ಅ.31ರಂದು ಸಚಿವ ಸಂಪುಟದ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ