ರಾಜ್ಯಾತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಸಾಧಕರ ಪಟ್ಟಿ ನಾಳೆ ಪ್ರಕಟಣೆ

ಬೆಂಗಳೂರು, ಅ.30-ರಾಜ್ಯ ಸರ್ಕಾರದ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ನಾಳೆ ಆಯ್ಕೆ ಮಾಡಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

ನವೆಂಬರ್ 1ರಂದು ವಿವಿಧ ಕ್ಷೇತ್ರಗಳ ಗಣ್ಯರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.ನಾಳೆ ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ಈ ಬಾರಿ ನೀಡಲಿರುವ 63 ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ಮುಖ್ಯಮಂತ್ರಿ, ಸಚಿವರಿಗೆ ಪ್ರಶಸ್ತಿ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ.ಪ್ರಶಸ್ತಿಗಾಗಿ ತಮ್ಮದೇ ರೀತಿಯಲ್ಲಿ ಪ್ರಭಾವ ಬೀರುವ ಪ್ರಯತ್ನವನ್ನು ಹಲವು ಆಕಾಂಕ್ಷಿಗಳು ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಪ್ರಶಸ್ತಿ ಆಕಾಂಕ್ಷಿಗಳ ಅರ್ಜಿಗಳ ಮಹಾಪೂರವೇ ಬಂದಿವೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಜಯಮಾಲಾ ಸೇರಿದಂತೆ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರು ಪ್ರಶಸ್ತಿಪುರಸ್ಕøತರನ್ನು ಅಂತಿಮಗೊಳಿಸುವ ಕಸರತ್ತು ನಡೆಸಿದ್ದಾರೆ.
ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಈಗಾಗಲೇ ಸಭೆ ನಡೆಸಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಶಸ್ತಿ ಪುರಸ್ಕøತರನ್ನು ಅಂತಿಮಗೊಳಿಸಲಾಗುತ್ತದೆ.

ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ತೊಡಗಿಕೊಂಡಿರುವುದರಿಂದ ಆಯ್ಕೆ ಸಮಿತಿ ನಡೆಯುವುದು ವಿಳಂಬವಾಗಿದೆ. ನಾಳೆ ಸಂಜೆಯೊಳಗೆ ಪ್ರಶಸ್ತಿ ಪುರಸ್ಕøತ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಡಾ.ಜಯಮಾಲಾ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೆರೇಗೌಡ, ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್, ಪಶು ಸಂಗೋಪನಾ ಸಚಿವ ವೆಂಕಟರಮಣ ನಾಡಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಅಕಾಡಮಿಗಳ ಅಧ್ಯಕ್ಷರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ.

ಕಳೆದ ಬಾರಿ 62 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು.ಈ ಬಾರಿ 63ನೇ ರಾಜ್ಯೋತ್ಸವವಾಗಿರುವುದರಿಂದ 63 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ