ನೀವು ಮಾಡಿರುವ ಪಾಪಗಳಿಗೆ ನಿಮ್ಮ ಮಕ್ಕಳಿಗೆ ದೇವರು ಶಿಕ್ಷೆ ನೀಡದಿರಲಿ, ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಅ.30- ನನ್ನ ಮಗನ ಸಾವು ನನಗೆ ದೇವರು ಕೊಟ್ಟ ಶಿಕ್ಷೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಆದರೆ ನಿಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾರ್ದನ ರೆಡ್ಡಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಬಳ್ಳಾರಿ ಲೋಕಸಭಾ ಉಪ ಚುನಾವಣೆಯ ಪ್ರಚಾರದ ವೇಳೆ ಜನಾರ್ದನ ರೆಡ್ಡಿ ಅವರು ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅವರ ಮಗನ ಸಾವಿನ ಬಗ್ಗೆ ಪ್ರಸ್ತಾಪಿಸಿದ್ದರು.

ಇದಕ್ಕೆ ಇಂದು ಟ್ವೀಟ್ ಮೂಲಕ ಉತ್ತರ ನೀಡಿರುವ ಸಿದ್ದರಾಮಯ್ಯ, ಜನಾರ್ದನ ರೆಡ್ಡಿ ಅವರ ಪಾಪಗಳಿಗೆ ದೇವರು ಅವರ ಮಕ್ಕಳನ್ನು ಶಿಕ್ಷಿಸದಿರಲಿ ಎಂದು ಪ್ರಾರ್ಥಿಸುವ ಮೂಲಕ ಮಾನವೀಯ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ