ಶ್ರೀನಗರ, ಅ.31- ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಟ್ರಾಲ್ ಗ್ರಾಮದ ಬಳಿ ಇಡೀ ದಿನ ನಡೆದ ಕಾರ್ಯಾಚರಣೆ ನಂತರ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿರುವುದಾಗಿ ಅವರು ಹೇಳಿದ್ದಾರೆ.
ಭದ್ರತಾ ಪಡೆಗಳ ಮೇಲೆ ಸ್ನೈಪರ್ ದಾಳಿ ನಡೆಸಲು ಬಳಸಿದ ಎಮ್-4 ಕಾರ್ಬೈನ್ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.