ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು, ನ.2-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಹಿಂಗಾರು ಮಳೆ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಮಳೆ ರಾಜ್ಯದ ಕೆಲವೆಡೆ ಬೀಳುವ ಸಾಧ್ಯತೆಗಳಿವೆ. ತಮಿಳುನಾಡು ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಅದರ ಜೊತೆಗೆ ವಾತಾವರಣದಲ್ಲಿ ಟ್ರಪ್ ಕೂಡ ಕಂಡುಬರುತ್ತಿದ್ದು, ಇದರ ಪ್ರಭಾವದಿಂದ ತಮಿಳುನಾಡಿನಲ್ಲಿ ನಿನ್ನೆಯಿಂದಲೇ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.
ತಮಿಳುನಾಡಿಗೆ ಹೊಂದಿಕೊಂಡಿರುವ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ