ಶಿವಮೊಗ್ಗ: ಉಪಚುನಾವಣೆ ಹಿನ್ನಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಎರಡು ಗ್ರಾಮಗಳಲ್ಲಿ ಮತದಾರರು ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಹೊಳೆ ಬೆಳೆಗಲು ಗ್ರಾಮ ಹಾಗೂ ದೊಡ್ಡಮಟ್ಟಿ ಗ್ರಾಮಗಳ ಗ್ರಾಮಸ್ಥರು ಮತದಾನ ಬಹಿಷ್ಕಾರ ಹಾಕಿದ್ದು, ಜನಪ್ರತಿನಿಧಿಗಳು ಗ್ರಾಮಕ್ಕೆ ಸೂಕ್ತ ಮೂಲಸೌಕರ್ಯ ಕಲ್ಪಿಸುತ್ತಿಲ್ಲ. ರಸ್ತೆ ಮತ್ತು ನೀರಿನ ಸೌಲಭ್ಯವಿಲ್ಲ ಈ ಹಿನ್ನಲೆಯಲ್ಲಿ ನಾವು ಮತದಾನ ಬಹಿಷ್ಕರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿಕೊಂಡರೂ, ಅದಕ್ಕೆ ಜನಪ್ರತಿನಿಧಿಗಳು ಯಾವುದೇರೀತಿಯಲ್ಲಿಯೂ ಸ್ಪಂದಿಸಿಲ್ಲ. ಹೀಗಾಗಿ ಎರಡೂ ಗ್ರಾಮಗಳ ಗ್ರಾಮಸ್ಥರು ಮತಚಲಾಯಿಸದಿರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ಇನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಮದ್ದೂರಿನ ಕುದ್ರೆಗುಂಡಿ ಕಾಲನಿಯ ದಲಿತರು ಕೂಡ ಮತದಾನ ಬಹಿಷ್ಕರಿಸಿದ್ದಾರೆ.
by election,shimoga, two villagers boycott,voting