ಬೆಂಗಳೂರು, ನ.7-ರಾಜಕೀಯ ಜೀವನದಲ್ಲಿ ಸ್ಥಾನಮಾನಕ್ಕೆ ಎಂದಿಗೂ ಬೇಡಿಕೆ ಇಟ್ಟವನಲ್ಲ. ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಯಾರನ್ನು ಕೇಳುವುದಿಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರಿಗೆ ಶುಭಾಶಯ ಹೇಳಲು ಬಂದಿದ್ದೇನೆ. ಜಮಖಂಡಿಯ ಗೆಲುವಿಗೆ ಅಭಿನಂದನೆ ಸಲ್ಲಿಸಲಿದ್ದೇನೆ. ಬೇರೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಕೇವಲ ಸೌಜನ್ಯದ ಭೇಟಿ ಎಂದು ಹೇಳಿದರು.
ಸಚಿವ ಸಂಪುಟದಲ್ಲಿ ಅವಕಾಶ ಕೊಟ್ಟರೆ ನಿಭಾಯಿಸುತ್ತೇವೆ, ಕೊಡದಿದ್ದರೆ ಬೇಸರವಿಲ್ಲ. ಯಾರನ್ನೂ ಅವಕಾಶಕ್ಕಾಗಿ ಕೇಳುವುದಿಲ್ಲ. ಎಂದಿಗೂ ಸ್ಥಾನಮಾನಕ್ಕಾಗಿ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು.
ಪಕ್ಷ ತೀರ್ಮಾನಿಸಿ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ಸಭಾಪತಿ ಸ್ಥಾನ ಕೊಟ್ಟರೂ ನಿರ್ವಹಿಸುತ್ತೇನೆ. ಕೊಡದಿದ್ದರೂ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.