ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಜನಾರ್ಧನ ರೆಡ್ಡಿ

ಬೆಂಗಳೂರು,ನ.9- ಗೋಲ್ಡ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಿಸಿಬಿ ಪೆÇಲೀಸರ ಬಂಧನದ ಬಲೆಯಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ರೆಡ್ಡಿ ಪರ ವಕೀಲರು ಇಂದು ಅರ್ಜಿ ಸಲ್ಲಿಸಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ನಿನ್ನೆ ರಜೆ ಇದ್ದ ಕಾರಣ ನಿರೀಕ್ಷಣಾ ಜಾಮೀನು ಕೋರಿ ಅವರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಇಂದು ಅರ್ಜಿ ಸಲ್ಲಿಸಿದ್ದು, ಮಧ್ಯಾಹ್ನ ಅರ್ಜಿ ವಿಚಾರಣೆಯಾಗುವ ಸಾಧ್ಯತೆ ಇದೆ.
ಕೋಟ್ಯಂತರ ಅವ್ಯವಹಾರ ಹಾಗೂ 57 ಕೆಜಿ ಚಿನ್ನದ ಗಟ್ಟಿ, ಕಿಕ್‍ಬ್ಯಾಕ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಜನಾರ್ಧನ್ ರೆಡ್ಡಿಗಾಗಿ ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ರೆಡ್ಡಿ ಆಪ್ತ ಅಲಿಖಾನ್‍ಗೆ ಸಂಜೆಯೊಳಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ.
ಆಂಬಿಡೆಂಟ್ ಕಂಪನಿಯು ಹೂಡಿಕೆದಾರರಿಗೆ ನೂರಾರು ಕೋಟಿ ವಂಚನೆ ಮಾಡಿದೆ. ವಂಚನೆಗೊಳಗಾಗಿರುವವರು ದೂರು ನೀಡಿರುವ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸಿಸಿಬಿ ಮಾಡದೆ ಪ್ರಕರಣಕ್ಕೆ ಸಂಬಂಧವಿಲ್ಲದ ಜನಾರ್ಧನ ರೆಡ್ಡಿ ಅವರ ಹಿಂದೆ ಬಿದ್ದಿದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

ಆಂಬಿಡೆಂಟ್ ಕಂಪನಿಯ ಪ್ರಮುಖ ಆರೋಪಿಗೂ ಈ ಪಕರಣದಲ್ಲಿ ನಿರೀಕ್ಷಣಾ ಜಾಮೀನು ದೊರೆತಿದೆ. ರೆಡ್ಡಿ ಅವರು ಮೇಲ್ನೋಟಕ್ಕೆ ಆರೋಪಿಯಾಗಿದ್ದು, ಅವರಿಗೂ ನಿರೀಕ್ಷಣಾ ಜಾಮೀನು ದೊರೆಯುವ ಸಾಧ್ಯತೆ ಇದೆ ಎಂದು ವಕೀಲರು ತಿಳಿಸಿದ್ದಾರೆ.
ಇತ್ತ ಜನಾರ್ಧನ ರೆಡ್ಡಿ ಹುಡುಕಾಟದಲ್ಲಿ ಸಿಸಿಬಿ ಪೆÇಲೀಸರು ತೊಡಗಿದ್ದು, ಜನಾರ್ಧನ ರೆಡ್ಡಿ ಹಾಗೂ ಅವರ ಆಪ್ತರ ಮೊಬೈಲ್‍ಗಳು ಸ್ವಿಚ್ ಆಫ್ ಆಗಿವೆ. ನಿರೀಕ್ಷಣಾ ಜಾಮೀನು ಕೋರಿ ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಬಳ್ಳಾರಿ, ಹೈದರಾಬಾದ್, ಬೆಂಗಳೂರು ಹಾಗೂ ಅವರ ಆಪ್ತರ ತೋಟದ ಮನೆ ಸೇರಿದಂತೆ ಎಲ್ಲೆಡೆ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಪೆÇಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇಂದು ಕೋರ್ಟ್‍ನಲ್ಲಿ ಜಾಮೀನು ದೊರೆಯದಿದ್ದರೆ ಸಿಸಿಬಿ ಪೆÇಲೀಸರ ಮುಂದೆ ರೆಡ್ಡಿ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೈಕೋರ್ಟ್‍ಗೆ ರಿಟ್:
ಜನಾರ್ಧನ ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ಗೂ ಕೂಡ ಎರಡು ರಿಟ್ ಅರ್ಜಿ ಸಲ್ಲಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ರದ್ದು ಕೋರಿ ಒಂದು ಕ್ರಿಮಿನಲ್ ರಿಟ್ ಪಿಟಿಷನ್ ಹಾಗೂ ತನಿಖಾಧಿಕಾರಿಗಳ ಬದಲಾವಣೆ ಕೋರಿ ಎರಡು ರಿಟ್ ಅರ್ಜಿಗಳನ್ನು ಸಲ್ಲಿಸಲು ಮುಂದಾಗಿದ್ದಾರೆ.
ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಹಾಗಾಗಿ ಪ್ರಕರಣವನ್ನು ರದ್ದು ಮಾಡಬೇಕು ಮತ್ತು ತನಿಖಾಧಿಕಾರಿಗಳು ಪೂರ್ವಾಗ್ರಹಪೀಡಿತರಾಗಿದ್ದು ಅವರನ್ನು ಬದಲಾವಣೆ ಮಾಡಬೇಕೆಂದು ಜನಾರ್ಧನ ರೆಡ್ಡಿ ಪರ ವಕೀಲರು ಮನವಿ ಮಾಡಲು ಮುಂದಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ