ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೇಜರಾಜ್ ಶರ್ಮನನ್ನು 5 ದಿನಗಳ ಕಾಲ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ.
ಆರೋಪಿ ತೇಜರಾಜ್ ನನ್ನು ತಡರಾತ್ರಿ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು ಹೆಚ್ಚಿನ ವಿಚಾರಣೆಗಾಗಿ ನ್ಯಾಧೀಶರು ಐದು ದಿನ ಪೋಲೀಸರ ವಶಕ್ಕೆ ನೀಡಿದ್ದಾರೆ.
ಬಿಗಿ ಭದ್ರತೆ : ಬುಧವಾರ ನಡೆದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಕೊಲೆ ಯತ್ನ ಪ್ರಕರಣ ಹಿನ್ನೆಲೆ ಲೋಕಾಯುಕ್ತ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಲೋಕಾಯುಕ್ತ ಕಚೇರಿಯ ಮೆಟಲ್ ಡಿಟೆಕ್ಟರ್ ಕೆಟ್ಟಿತ್ತು ಆದರೆ ಈಗ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಮಾತ್ರವಲ್ಲದೇ ಹೈಕೋರ್ಟ್ ಮತ್ತು ವಿಧಾನಸಭೆಗೆ ಸಂಸತ್ ಮಾದರಿಯ ಭದ್ರತೆ ಕಲ್ಪಿಸಲಾಗಿದೆ ಎಂದೂ ಹೇಳಿದ್ದಾರೆ.