ಬೆಂಗಳೂರು, ನ.19-ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಹಕರಿಸಬೇಕೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು, ರೈತರ ಪ್ರತಿಭಟನೆ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಗೊತ್ತಿದೆ. ನಾವು ಹೆದರಿ ಓಡಿ ಹೋಗುವುದಿಲ್ಲ. ಕೀಳುಮಟ್ಟದ ರಾಜಕಾರಣ ಬಿಡಬೇಕು, ಬಿಜೆಪಿ ಅವರಿಗೆ ನಾಚಿಕೆಯಾಗಬೇಕು ಎಂದರು.
ಕೇಂದ್ರದಲ್ಲಿ 17 ಮಂದಿ ಸಂಸದರಿದ್ದರೂ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.