ನಾವೆಲ್ಲ ಮಹಾಘಟಬಂಧನದ ಭಾಗ; ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಸಜ್ಜು: ಮಮತಾ ಬ್ಯಾನರ್ಜಿ

ಹೌರಾ: ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಡುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಹಾಘಟಬಂಧನ್ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೌರಾದಲ್ಲಿ ನಡೆದ ಉಭಯ ನಾಯಕರ ಈ ಮಾತುಕತೆ ಲೋಕಸಭಾ ಚುನಾವಣೆಹಿನ್ನಲೆಯಲ್ಲಿ ತೀವ್ರ ಅಹತ್ವಪಡೆದುಕೊಂಡಿದೆ.

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ನಾವೆಲ್ಲರೂ ಮಹಾಘಟಬಂದನದ ಮುಂದಾಳುಗಳಾಗಳಾಗಿದ್ದು, ಎಲ್ಲರೂ ಸಮಾನವಾದ ಜವಾಬ್ದಾರಿಗಳನ್ನು ಹೊಂದಿದ್ದೇವೆ. ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸುವುದೇ ನಮ್ಮ ಗುರಿ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಹಾಮೈತ್ರಿ ನಿಟ್ಟಿನಲ್ಲಿ ನಾವು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ನಾವಿಂದು ಚರ್ಚೆ ನಡೆಸಿದ್ದು, ದೇಶ ರಕ್ಷಣೆಗಾಗಿ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸುವುದಾಗಿ ಹೇಳಿದರು.

ಈ ವೇಳೆ ಮಾತನಾಡಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ದೇಶ ಹಾಗೂ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತ ಸಂಸ್ಥೆಗಳನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಸಿಬಿಐ, ಇಡಿ, ಆರ್​ಬಿಐಗಳಂಥ ಸಂಸ್ಥೆಗಳು ಒತ್ತಡದಲ್ಲಿವೆ. ಇವುಗಳನ್ನು ರಕ್ಷಿಸಬೇಕಾದ ಜವಾಬ್ದಾರಿ ಹಿರಿಯನಾಯಕರಾದ ನಮ್ಮಮೇಲಿದೆ ಎಂದು ತಿಳಿಸಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿ ಕೂಟವನ್ನು ಎದುರಿಸುವ ನಿಟ್ಟಿನಲ್ಲಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ನಿರತವಾಗಿರುವ ಚಂದ್ರಬಾಬು ನಾಯ್ಡು ಈಗಾಗಲೇ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಇದರ ಮುಮ್ದುವರಿದ ಭಾಗವಾಗಿ ಇಂದು ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇನ್ನು ಇದೇ 22 ರಂದು ದೆಹಲಿಯಲ್ಲಿ ಮಹಾಘಟಬಂಧನ್ ಬೆಂಬಲಿಸುವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.

Lok sabha Election,Mahagathbandhan, Mamata Banerjee, Chandrababu Naidu,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ