ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಸಮಾಲೋಚನೆ ನಡೆಸುವಂತೆ (ಆರ್‍ಬಿಐ)ಗೆ ವೆಂಕಯ್ಯನಾಯ್ಡು ಸಲಹೆ

ನವದೆಹಲಿ, ನ.27 (ಪಿಟಿಐ)- ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಸಮಾಲೋಚನೆ ನಡೆಸುವಂತೆ ಭಾರತೀಯ ರಿಜರ್ವ್ ಬ್ಯಾಂಕ್ (ಆರ್‍ಬಿಐ) ಮತ್ತು ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯಕ್ಕೆ ಉಪರಾಷ್ಟ್ರಪತಿ ಡಾ.ಎಂ.ವೆಂಕಯ್ಯನಾಯ್ಡು ಸಲಹೆ ಮಾಡಿದ್ದಾರೆ.

ಆರ್‍ಬಿಐ ಮತ್ತು ಹಣಕಾಸು ಸಚಿವಾಲಯದ ನಡುವೆ ಇತ್ತೀಚೆಗೆ ಭುಗಿಲೆದ್ದ ವಿವಾದ ಕುರಿತು ಪ್ರಸ್ತಾಪಿಸಿದ ಅವರು ಆತ್ಮಾವಲೋಕನದ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡು ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವ ಸನ್ನಿವೇಶ ಇದಾಗಿದೆ ಎಂದರು.

ದೆಹಲಿಯಲ್ಲಿ ಸಿಐಪಿಐ ಕೈಗಾರಿಕಾ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಮುಖ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಅವುಗಳನ್ನು ದೊಡ್ಡದು ಮಾಡದೆ ಪರಸ್ಪರ ಸೌಹಾರ್ದಯುತ ಚರ್ಚೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ