ಬೆಂಗಳೂರು, ನ.28- ಕನ್ನಡದ ಮೇರು ನಟರಾದ ಡಾ.ರಾಜ್ಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರ ಸ್ಮಾರಕಗಳು ಒಂದೇ ಕಡೆ ಇರುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರೂ ಕನ್ನಡದ ಮೇರು ನಟರು, ಈಗಾಗಲೇ ರಾಜ್ಕುಮಾರ್ ಮತ್ತು ಅಂಬರೀಶ್ ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ಅಭಿಮಾನ್ ಸ್ಟುಡಿಯೋದಲ್ಲಿ ನಡೆದಿತ್ತು. ಈ ಮೂವರ ಸ್ಮಾರಕವನ್ನು ಒಂದೆ ಕಡೆ ಇರಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.
ಅದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದ ಅವರು, ರಾಜ್ಯ ಸರ್ಕಾರ ಅಂಬರೀಶ್ ಅವರ ಅಂತಿಮ ಸಂಸ್ಕಾರವನ್ನು ಶಾಂತಿಯುತವಾಗಿ ನಡೆಸಿದೆ ಎಂದು ತಿಳಿಸಿದರು.