ಕೊಹಿಮಾ:ಮಾ-8: ನಾಗ್ಯಾಲ್ಯಾಂಡ್ ನ ನೂತನ ಮುಖ್ಯಮಂತ್ರಿಯಾಗಿ ನೀಫಿಯು ರಿಯೊ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಾಗಾಲ್ಯಾಂಡ್ ರಾಜ್ಯಪಾಲರಾದ ಪದ್ಮನಾಭ ಆಚಾರ್ಯ ಅವರು ನೂತನ ಸಿಎಂ ನೀಫಿಯು ಅವರಿಗೆ ಪ್ರತಿಜ್ನಾವಿಧಿ ಬೋಧಿಸಿದರು. ನೀಫಿಯು ರಿಯೊ ಅವರೊಂದಿಗೆ 11 ಶಾಸಕರೂ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಸೇರಿದಂತೆ ಬಿಜೆಪಿ ಹಲವು ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಇತ್ತೀಚೆಗೆ ನಡೆದ ನಾಗ್ಯಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್ ಡಿಪಿಪಿ ಮೈತ್ರಿಕೂಟ 32 ಸ್ಥಾನಗಳಲ್ಲಿ ಜಯಗಳಿಸಿತ್ತು, ಎನ್ ಪಿಎಫ್ 23 ಸ್ಥಾನಗಳಲ್ಲಿ ಜಯಗಳಿಸಿತ್ತು.