ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ಜನಾಗ್ರಹ ಸಭೆ

ಬೆಂಗಳೂರು, ಡಿ.2-ಭಾರತದ ಸ್ವಾಭಿಮಾನ ಕಾಪಾಡಲು ಭಾರತೀಯರೆಲ್ಲರೂ ಸೇರೋಣ ಎಂಬ ಶೀರ್ಷಿಕೆಯೊಂದಿಗೆ ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ದೇಶಾದ್ಯಂತ ಕಹಳೆ ಮೊಳಗಿಸಿದೆ. ಜನಾಗ್ರಹ ಸಭೆಗಳನ್ನು ನಡೆಸುತ್ತಿದೆ.
ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸುವ ಕೆಲಸವನ್ನು ಮಾಡುತ್ತಿದ್ದು, ದೇಶಾದ್ಯಂತ ಬೃಹತ್ ಸಭೆ, ರ್ಯಾಲಿಗಳನ್ನು ಹಮ್ಮಿಕೊಂಡಿದೆ.

ಇಂದು ರಾಮಮಂದಿರಕ್ಕಾಗಿ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್‍ಜನಾಗ್ರಹ ಸಭೆ ನಡೆಯುತ್ತಿದೆ.
ದಕ್ಷಿಣ ಕರ್ನಾಟಕದ ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಈ ಸಭೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ವಿರಾಟ್ ಶಕ್ತಿಪ್ರದರ್ಶನ ಮಾಧಿದ್ದಾರೆ. ಇದಕ್ಕಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಹಸ್ರಾರು ವಿಎಚ್‍ಪಿ ಕಾರ್ಯಕರ್ತರು, ರಾಮಭಕ್ತರು ಆಗಮಿಸಿದ್ದಾರೆ.

ಸಭೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಹರಿದ್ವಾರ ಪರಮಾರ್ಥ ಆಶ್ರಮದ ಶ್ರೀ ಚಿನ್ಮಯಾನಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಭಾಗವಹಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಹಸರ ಕಾರ್ಯವಾಹಕ ಭಾಗಯ್ಯಜೀ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇದಕ್ಕೂ ಮುನ್ನ ನಗರದ ಹಲವೆಡೆ ರಾಮ ಮತ್ತು ಹನುಮಂತನ ಬೃಹತ್ ಪ್ರತಿಮೆಗಳ ರಥಯಾತ್ರೆ ಹಾಗೂ ರಾಮಜನ್ಮಭೂಮಿ ಇತಿಹಾಸ ಸಾರುವ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.

ಸಭೆಯ ವೀಕ್ಷಣೆಗಾಗಿ ಎಲ್‍ಸಿಡಿ ಪರದೆಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ, ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೆರವಣಿಗೆ ನಡೆಯುವ ದಾರಿಯುದ್ದಕ್ಕೂ ಕೇಸರಿ ಧ್ವಜಗಳು ರಾರಾಜಿಸುತ್ತಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ