ಬೆಂಗಳೂರು, ಡಿ.4- ಆ್ಯಂಬಿಡೆಂಟ್ ಕಂಪೆನಿ ಜತೆ ಜನಾರ್ದನರೆಡ್ಡಿ ಡೀಲ್ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ರೆಡ್ಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿದೆ.
ಆ್ಯಂಬಿಡೆಂಟ್ ಕಂಪೆನಿ ಜತೆ ರೆಡ್ಡಿ ಡೀಲ್ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದು ಸಿಸಿಬಿ ಪೆÇಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿತ್ತು.
ಮಧ್ಯಂತರ ಆದೇಶವನ್ನು ಪೀಠ ಮತ್ತೆ ವಿಸ್ತರಿಸಿ ವಿಚಾರಣೆ ಮುಂದೂಡಿದೆ.