ಬೆಂಗಳೂರು, ಡಿ.4- ಬಿಬಿಎಂಪಿ ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಾದೇಶಿಕ ಚುನಾವಣಾ ಆಯುಕ್ತರಾದ ಶಿವಯೋಗಿ ಕಳಸದ್ ಅವರ ನೇತೃತ್ವದಲ್ಲಿ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ನಡೆಯಲಿರುವ ಚುನಾವಣೆಗೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ಮಾಡಲಾಯಿತು.
ಒಟ್ಟು 260 ಮತದಾರರ ಪಟ್ಟಿ ಸಿದ್ಧಗೊಂಡಿದೆ.ಚುನಾವಣಾ ಆಯೋಗ ಪಕ್ಷವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದೆ.ಉಪಮೇಯರ್ ಚುನಾವಣೆ ಮುಗಿದ ಬಳಿಕ ಸ್ಥಾಯಿ ಸಮಿತಿ ಚುನಾವಣೆ ನಡೆಸಲಾಗುವುದು.ಅವಶ್ಯವಿದ್ದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ನಡೆಯಲಿದೆ.