ರಫೇಲ್ ವಿಚಾರದಲ್ಲಿ ಕಾಂಗ್ರೇಸ್ಸಿಗೆ ಅಪಮಾನ, ಕೆ.ಎಸ್.ಈಶ್ವರಪ್ಪ

ಬೆಳಗಾವಿ,ಡಿ.14- ರಫೇಲ್ ಡೀಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಪಮಾನವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಫೇಲ್ ಡೀಲ್ ಸಂಬಂಧದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈಗಲಾದರೂ ಆಪಾದಿಸುವುದನ್ನು ಬಿಟ್ಟು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕು ಎಂದರು.

ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗುವ ಸಂದರ್ಭದಲ್ಲಿ ಮೋದಿ ಹಾಗೂ ಬಿಜೆಪಿ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದರು. ಈಗ ಸುಪ್ರೀಂಕೋರ್ಟ್ ರಫೇಲ್ ಸಂಬಂಧ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಕಾಂಗ್ರೆಸ್‍ಗೆ ಭಾರೀ ಮುಖಭಂಗವಾಗಿದೆ ಎಂದರು.
ರಫೇಲ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ವಜಾ ಆಗಿರುವುದು ಕಾಂಗ್ರೆಸ್‍ಗೆ ಮುಖಭಂಗವಾದಂತಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ