ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಸಚಿವ ರೇವಣ್ಣ

ಬೆಳಗಾವಿ, ಡಿ.14- ವಿಧಾನಪರಿಷತ್‍ನ ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಮಾಜಿ ಸಚಿವ ಎಸ್.ಆರ್.ಪಾಟೀಲ್ ಸಭಾಪತಿಯಾಗಬೇಕೆಂದು ಹೇಳಿದ್ದರು. ಹೀಗಾಗಿ ಎಸ್.ಆರ್.ಪಾಟೀಲ್ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದವರು ಎಂಬ ಕಾರಣಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ದೇವೆಗೌಡರು ಒಪ್ಪಿಗೆ ಕೊಟ್ಟಿದ್ದರು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ನಿಲುವು ಬದಲಾಗಿದ್ದರಿಂದ ಎಸ್.ಆರ್.ಪಾಟೀಲ್ ಬದಲಾಗಿ ಪ್ರತಾಪ್‍ಚಂದ್ರಶೆಟ್ಟಿ ಅವರನ್ನು ಸಭಾಪತಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದರು.

ಪ್ರತಾಪ್ ಚಂದ್ರಶೆಟ್ಟಿ ಅವರ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದರು.
ಮಾಜಿ ಸಚಿವ ಬಸವರಾಜ್ ಹೊರಟ್ಟಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ