ಸಿಬ್ಬಂಧಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ನೇಮಕಾತಿ ಪ್ರಕ್ರಿಯೆ

ಬೆಳಗಾವಿ, ಡಿ.14-ರಾಜ್ಯದಲ್ಲಿ ಪಶುವೈದ್ಯಕೀಯ ಇಲಾಖೆಯ ಪಶು ವೈದ್ಯಾಧಿಕಾರಿ ಸೇರಿದಂತೆ 466 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅಲ್ಲಿ ಅನುಮತಿ ಸಿಕ್ಕ ಬಳಿ ಒಂದು ತಿಂಗಳೊಳಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್‍ನಾಡಗೌಡ ಭರವಸೆ ನೀಡಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್‍ಅವರು ಪ್ರಶ್ನೆ ಕೇಳಿ, ಪಶು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇರುವ ಬಗ್ಗೆ ಸರ್ಕಾರದ ಗಮನ ಸೆಳೆದರು.
ಹೀಗಾದರೆ ಜಾನುವಾರು ಕಾಳಜಿ ವಹಿಸುವುದಾದರೂ ಹೇಗೆ?ಎಂದು ಪ್ರಶ್ನಿಸಿದರು.
ಅದಕ್ಕೆ ಸುದೀರ್ಘ ಉತ್ತರ ನೀಡಿದ ಸಚಿವರು, ಬಹುತೇಕ ಎಲ್ಲಾ ಹುದ್ದೆಗಳು ಭರ್ತಿ ಮಾಡಿಕೊಳ್ಳಲಾಗುತ್ತಿದೆ.ಇತ್ತೀಚೆಗೆ 466 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.ಉಳಿದಂತೆ ಡಿ ಗ್ರೂಪ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ