ಮೈಸೂರು, ಮಾ.9-ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಹಾಸಿಗೆ, ದಿಂಬು ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಆರೋಪಿಸಿದರು.
ನಜರ್ಬಾದ್ನಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಮೀಕ್ಷಾ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಚುನಾವಣೆ ಸಮೀಪಿಸಿದೆ ಎಂದು ನಾವು ಸಮೀಕ್ಷೆ ಮಾಡಿಲ್ಲ. ಕಳೆದ ಎರಡು ವರ್ಷಗಳಿಂದ ಸಮೀಕ್ಷೆ ನಡೆಸಿದ್ದೇವೆ. ರಾಜ್ಯದಲ್ಲಿರುವ ಎಲ್ಲ ಜಿಲ್ಲೆಗಳ ವಿದ್ಯಾರ್ಥಿ ನಿಲಯಗಳಿಗೂ ಭೇಟಿ ನೀಡಿ ವರದಿ ಸಿದ್ದಪಡಿಸಿದ್ದೇವೆ ಎಂದು ತಿಳಿಸಿದರು.
ಯಾವುದೇ ವಿದ್ಯಾರ್ಥಿ ನಿಲಯದಲ್ಲೂ ಸ್ವಚ್ಛತೆ ಇಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕು. ಹಾಗಾದಾಗ ಮಾತ್ರ ಉತ್ತಮ ಫಲಿತಾಂಶ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ನಡೆದುಕೊಂಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ನಗರಾಧ್ಯಕ್ಷ ಮಂಜುನಾಥ್, ಮುಖಂಡರಾದ ನಾಗೇಂದ್ರ, ಪ್ರಭಾಕರ್ ಸಿಂಧೆ, ಗಿರಿಧರ್, ಮುರುಳಿ ಮತ್ತಿತರರು ಹಾಜರಿದ್ದರು.