ಬೆಳಗಾವಿ, ಡಿ.17- ಕೃಷಿ ಅಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡಲು ಹಾಲಿ ಇರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾವಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಪರಿಷತ್ನಲ್ಲಿಂದು ತಿಳಿಸಿದರು.
ಸದಸ್ಯ ಶರಣಪ್ಪ ಮಟ್ಟೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪದವೀಧರಲ್ಲದ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಯಿಂದ ಕೃಷಿ ಅಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡಲು ಈಗಿರುವ ನಿಯಮಗಳನ್ನು ತಿದ್ದುಪಡಿ ಮಾಡಲಾಗುವುದು. 2 ತಿಂಗಳೊಳಗೆ ಈ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನು ನೀಡಿದರು.
ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ತರಲು ಮುಂದಾಗಿರುವುದರಿಂದ ಸೇವಾ ಹಿರಿತನ ಇಲ್ಲವೆ 20-30 ವರ್ಷಗಳ ಸೇವಾ ಅನುಭವ ಹೊಂದಿರುವ ಪದವೀಧರರಲ್ಲದ ಸಹಾಯಕ ಕೃಷಿ ಅಧಿಕಾರಿಗಳಿಂದ ಕೃಷಿ ಅಧಿಕಾರಿ ಹುದೆಗೆ ಮುಂಬಡ್ತಿ ನೀಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.