ಬೆಳಗಾವಿ, ಡಿ.18- ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ವಿ.ಸೋಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪತ್ರಿಕೆಯೊಂದರಲ್ಲಿ ವಿದ್ಯಾರ್ಥಿಗಳ ಮಾಹಿತಿ ಸೋರಿಕೆಯಾಗಿರುವುದು ಪ್ರಕಟವಾಗಿದೆ. ಆ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು. ಕನ್ನಡ ಭಾಷೆಯಲ್ಲೇ ನೀಟ್ ಪರೀಕ್ಷೆ ಬರೆಯುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.