6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಭತ್ಯೆ ನೀಡುವ ಬಗ್ಗೆ ಸದ್ಯದಲ್ಲೇ ಆದೇಶ ಸಿ.ಎಂ

ಬೆಳಗಾವಿ,ಡಿ.18-ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವಿವಿಧ ಭತ್ಯೆಗಳನ್ನು ನೀಡುವ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಸ್.ರಾಮಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, 6ನೇ ವೇತನ ಆಯೋಗವು ಈಗಾಗಲೇ ಸರ್ಕಾರಕ್ಕೆ ಎರಡು ಸಂಪುಟಗಳಲ್ಲಿ ಶಿಫಾರಸು ಮಾಡಿದೆ ಆ ಶಿಫಾರಸುಗಳನ್ನು ಸರ್ಕಾರ ಪರಿಶೀಲಿಸುತ್ತಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ